ನವದೆಹಲಿ:ದೇಶದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 80 ಲಕ್ಷದ ಸಮೀಪದಲ್ಲಿದೆ. ಈವರೆಗೆ ಶೇಕಡಾ 90ರಷ್ಟು ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಹಾಗೆಯೇ ಹೊಸ ಸೋಂಕಿತರ ಸಂಖ್ಯೆಯಲ್ಲೂ ಕೂಡ ಇಳಿಮುಖವಾಗುತ್ತಿದೆ.
ದೇಶದಲ್ಲಿ ಶೇಕಡಾ 90ರಷ್ಟು ಕೊರೊನಾ ಸೋಂಕಿತರು ಚೇತರಿಕೆ: ಕೋವಿಡ್ ಪ್ರಕರಣಗಳು ಇಳಿಮುಖ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಶೇಕಡಾ 90ರಷ್ಟು ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ 43,893 ಸೋಂಕಿತರು ಪತ್ತೆಯಾಗಿದ್ದು, 508 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 79,90,322 ಹಾಗೂ ಮೃತರ ಸಂಖ್ಯೆ 1,20,010ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 72,59,509 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 6,10,803 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 27ರವರೆಗೆ 10,54,87,680 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಮಂಗಳವಾರ ಒಂದೇ ದಿನ 10,66,786 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.