ನವದೆಹಲಿ: ಲಾಕ್‌ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಕೋವಿಡ್ ಸೋಂಕಿತರ ಸಂಖ್ಯೆ ಕೂಡ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಇದೇ ಮೊದಲ ಬಾರಿಗೆ ಬರೋಬ್ಬರಿ 5,242 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1 ಲಕ್ಷದ ಸಮೀಪಕ್ಕೆ ಬಂದು ನಿಂತಿದೆ.
ಸದ್ಯ ಈವರೆಗೆ ಒಟ್ಟು 96,169ಕ್ಕೆ ಸೋಂಕಿತರಾಗಿದ್ದಾರೆ. ಇದರಲ್ಲಿ 36,824 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೆಲ ನಿರ್ಬಂಧಗಳನ್ನು ತೆರೆವುಗೊಳಿಸಿ ಲಾಕ್‌ಡೌನ್‌ಅನ್ನು ಮೇ 31ರ ವರೆಗೆ ವಿಸ್ತರಣೆ ಮಾಡಿದ ಬೆನ್ನಲ್ಲೇ ಈ ಅಂಕಿಗಳು ಹೊರ ಬಿದ್ದಿದೆ.