ನವದೆಹಲಿ: ವಿಶ್ವದ ಕೋವಿಡ್ ಪೀಡಿತ ರಾಷ್ಟ್ರಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲೀಗ ಕೋವಿಡ್ ಕೇಸ್ಗಳ ಸಂಖ್ಯೆ 52 ಲಕ್ಷ ಗಡಿ ದಾಟಿದೆ. ಆದರೆ 42 ಲಕ್ಷ ಸೋಂಕಿತರು ಗುಣಮುಖರಾಗಿದ್ದು, 10 ಲಕ್ಷ ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 93,337 ಸೋಂಕಿತರು ಪತ್ತೆಯಾಗಿದ್ದು, 1,247 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 53,08,015 ಹಾಗೂ ಮೃತರ ಸಂಖ್ಯೆ 85,619ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 42,08,432 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 10,13,964 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಸೆಪ್ಟೆಂಬರ್ 18ರವರೆಗೆ 6,24,54,254 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,81,911 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.