ನವದೆಹಲಿ:ಭಾರತದಲ್ಲಿ ಕಿಲ್ಲರ್ ಕೊರೊನಾ ಹಾವಳಿ ಹೆಚ್ಚಾಗಿದ್ದು, ಪ್ರಕರಣಗಳ ಸಂಖ್ಯೆ 2 ಮಿಲಿಯನ್(20 ಲಕ್ಷ) ಗಡಿ ದಾಟಿದೆ. ಕೋವಿಡ್ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲೇ ಇದ್ದು, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ದೆಹಲಿ ಹಾಗೂ ಉತ್ತರ ಪ್ರದೇಶ ನಂತರದ ಸ್ಥಾನಗಳಲ್ಲಿವೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 62,538 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,27,075ಕ್ಕೆ ಹಾಗೂ ಮೃತರ ಸಂಖ್ಯೆ 41,585ಕ್ಕೆ ಏರಿಕೆಯಾಗಿದೆ.