ನವದೆಹಲಿ: ಭಾರತದಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ 70 ಲಕ್ಷ ಗಡಿ ದಾಟಿದೆ ಎಂದು ಭಯಪಡುವ ಅವಶ್ಯಕತೆಯಿಲ್ಲ. ಏಕೆಂದರೆ 70.5 ಲಕ್ಷ ಸೋಂಕಿತರಲ್ಲಿ ಪುಟ್ಟ ಕಂದಮ್ಮಗಳು, ವೃದ್ಧರು ಸೇರಿದಂತೆ 60 ಲಕ್ಷ ಜನರು ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ.
ಕೋವಿಡ್ ಪೀಡಿತ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಉತ್ತರ ಪ್ರದೇಶದಲ್ಲಿನ ಗುಣಮುಖರ ಸಂಖ್ಯೆ ದೇಶದಲ್ಲಿನ ಗುಣಮುಖರ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚಿನ ಪಾಲು ಇದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 74,383 ಸೋಂಕಿತರು ಪತ್ತೆಯಾಗಿದ್ದು, 918 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 70,53,807 ಹಾಗೂ ಮೃತರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 60,77,977 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 8,67,496 ಕೇಸ್ಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಅಕ್ಟೋಬರ್ 10ರವರೆಗೆ 8,68,77,242 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,78,544 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.