ನವದೆಹಲಿ: ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 63 ವರ್ಷ ವೃದ್ಧರೊಬ್ಬರು ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ನಡೆದಿದೆ.
ಆಸ್ಪತ್ರೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಆತ್ಮಹತ್ಯೆ..! - ದೇಶದಲ್ಲಿ ಕೊರೊನಾ ಸೋಂಕಿತರು
ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಮೇ 20ರಂದು ಬಾತ್ರಾ ಆಸ್ಪತ್ರೆಗೆ ಕಿಡ್ನಿ ಸಮಸ್ಯೆಯಿಂದಾಗಿ ದಾಖಲಾಗಿದ್ದರು. ಕೆಲವು ದಿನಗಳ ನಂತರ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಕಿಡ್ನಿ ಸಮಸ್ಯೆಯ ಚಿಕಿತ್ಸೆ ಜೊತೆಗೆ ಕೊರೊನಾ ಚಿಕಿತ್ಸೆಯನ್ನೂ ಕೂಡಾ ನೀಡಲಾಗುತ್ತಿತ್ತು. ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಈ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ಯ ಭಾರತದಲ್ಲಿ ಕೇವಲ 24 ಗಂಟೆಯಲ್ಲಿ 8,171 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,98,706ಕ್ಕೆ ಏರಿಕೆಯಾಗಿದೆ. 97,581 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 95,526 ಗುಣಮುಖರಾಗಿದ್ದು, 5,598 ಮಂದಿ ಸಾವನ್ನಪ್ಪಿದ್ದಾರೆ.