ನವದೆಹಲಿ:ಲಾಕ್ಡೌನ್ನಲ್ಲಿ ಕೊಂಚ ರಿಲೀಫ್ ನೀಡಿರುವ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಸೋಮವಾರದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಪುನರಾರಂಭಿಸಿದೆ.
ಲಾಕ್‌ಡೌನ್ ಮಧ್ಯೆ ಕೊಂಚ ರಿಲೀಫ್.. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭ - ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ
ಇಂದಿನಿಂದ ಹಾಟ್ಸ್ಪಾಟ್ ಅಲ್ಲದ ಪ್ರದೇಶಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಪುನರಾರಂಭಿಸಲಾಗಿದೆ.
ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ಸಲುವಾಗಿ ಭಾರತವು ಇಂದಿನಿಂದ ಹಾಟ್ಸ್ಪಾಟ್ ಅಲ್ಲದ ಪ್ರದೇಶಗಳಲ್ಲಿ ಜಾರಿಯಲ್ಲಿರುವ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಗೊಳಿಸುತ್ತಿದೆ. ಹೀಗಾಗಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತೆ ಟೋಲ್ ಸಂಗ್ರಹವನ್ನು ಪ್ರಾರಂಭಿಸಿದೆ.
ಮಾರ್ಚ್ 24 ರಂದು 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಣೆಯಾದ ನಂತರ ಹೆದ್ದಾರಿ ಪ್ರಾಧಿಕಾರ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿತ್ತು. ಆದರೆ ಇಂದು ಮುಂಜಾನೆಯಿಂದಲೇ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುತ್ತಿರುವ ದೃಶ್ಯ ಕಂಡುಬಂದಿದೆ.