ಹೈದರಾಬಾದ್: ದೇಶಾದ್ಯಂತ ಮಹಾಮಾರಿ ಕೊರೊನಾ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 17 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 418 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 4,73,105 ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಇಲ್ಲಿಯವರೆಗೆ 14,894 ಜನರು ಈ ಸೋಂಕಿನಿಂದ ಸಾವನ್ನಪ್ಪಿದ್ದು, 2,71,697 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,86,514 ಸಕ್ರಿಯ ಪ್ರಕರಣಗಳಿವೆ.
ಯಾವ ರಾಜ್ಯದಲ್ಲಿ ಎಷ್ಟು ಮಂದಿ ಸೋಂಕಿತರು!
ನವದೆಹಲಿ: ಕೋವಿಡ್ ಸೋಂಕು ಹರಡುವಿಕೆಯಲ್ಲಿ ಮುಂಬೈ ಹಿಂದಿಕ್ಕಿರುವ ದೆಹಲಿಯಲ್ಲಿ ಇಂದು 3390 ಹೊಸ ಕೇಸ್ಗಳು ಕಾಣಿಸಿಕೊಂಡಿದ್ದು, 64 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಸದ್ಯ 73,780 ಪ್ರಕರಣಗಳಿದ್ದು, ಇದರಲ್ಲಿ 44,765 ಜನರು ಡಿಸ್ಚಾರ್ಜ್ ಆಗಿದ್ದಾರೆ. 2429 ಜನರು ಸಾವನ್ನಪ್ಪಿದ್ದಾರೆ. ದೆಹಲಿಯ ಪ್ರತಿಯೊಂದು ಮನೆಗೆ ತೆರಳಿ ಕೋವಿಡ್ ಟೆಸ್ಟ್ ಮಾಡಿಸಲು ಆದೇಶ ನೀಡಲಾಗಿದೆ.
ಮಹಾರಾಷ್ಟ್ರ: ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕು ಕಂಡು ಬಂದಿರುವ ಮಹಾರಾಷ್ಟ್ರದಲ್ಲಿ ಇದೀಗ ಜಿಮ್ ಹಾಗೂ ಸಲೂನ್ ಓಪನ್ ಮಾಡಲು ನಿರ್ಧರಿಸಲಾಗಿದೆ. ಜತೆಗೆ ಸಾರ್ವಜನಿಕ ಸಭೆ ಸೇರುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಮಹಾರಾಷ್ಟ್ರದಲ್ಲಿ 142,900 ಸೋಂಕಿತ ಪ್ರಕರಣಗಳಿದ್ದು, 6,739 ಜನರು ಸಾವನ್ನಪ್ಪಿದ್ದಾರೆ. 73,792 ಜನರು ಗುಣಮುಖರಾಗಿದ್ದಾರೆ. ಇಂದು ಕೂಡ 192 ಜನರು ಸಾವನ್ನಪ್ಪಿದ್ದು, 4841 ಹೊಸ ಕೇಸ್ಗಳು ಪತ್ತೆಯಾಗಿವೆ.
ರಾಜಸ್ಥಾನ: ರಾಜಸ್ಥಾನದಲ್ಲೂ 76 ಹೊಸ ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 16,085ಕ್ಕೆ ಏರಿಕೆಯಾಗಿದೆ. ಇದರಲ್ಲಿ 12,386 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಕಾರಣ ಜೈಪುರದ ಕನಿಷ್ಠ 50 ಪೊಲೀಸ್ ಠಾಣಾ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ.