ಕರ್ನಾಟಕ

karnataka

ETV Bharat / bharat

ದೇಶದಲ್ಲಿ 6 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; 3.5 ಲಕ್ಷ ಜನ ಗುಣಮುಖ - ಕೊವಾಕ್ಸಿನ್

ದೆಹಲಿಯಲ್ಲಿ ಕೋವಿಡ್​-19 ಚಿಕಿತ್ಸೆಗಾಗಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಿದ್ದು, ಗುಣಮುಖರಾದ ರೋಗಿಗಳು 14 ದಿನಗಳ ನಂತರ ತಮ್ಮ ಪ್ಲಾಸ್ಮಾ ದಾನ ಮಾಡಬಹುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

COVID-19 news from across the nation
COVID-19 news from across the nation

By

Published : Jul 3, 2020, 12:12 AM IST

ಹೈದರಾಬಾದ್: ಭಾರತದಲ್ಲಿ ಈವರೆಗೆ ಒಂಭತ್ತು ಮಿಲಿಯನ್​ಗೂ ಅಧಿಕ ಕೋವಿಡ್​-19 ಪರೀಕ್ಷೆಗಳನ್ನು ನಡೆಸಲಾಗಿದೆ. ಜುಲೈ 1 ರ ವರೆಗೆ ದೇಶದಲ್ಲಿ 90,56,173 ಸ್ಯಾಂಪಲ್​ಗಳನ್ನು ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ. ಇಲ್ಲಿಯವರೆಗೆ 6,04,641 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 3,59,859 ರೋಗಿಗಳು ಗುಣಮುಖರಾಗಿದ್ದಾರೆ ಹಾಗೂ 17,834 ಜನ ಕೋವಿಡ್​ಗೆ ಬಲಿಯಾಗಿದ್ದಾರೆ ಎಂದು ಐಸಿಎಂಆರ್ ತಿಳಿಸಿದೆ.

ದೇಶದ ಪ್ರಮುಖ ರಾಜ್ಯಗಳಲ್ಲಿ ಕೋವಿಡ್​ ಪರಿಸ್ಥಿತಿ ಹೀಗಿದೆ:

ದೆಹಲಿ

ದೆಹಲಿಯಲ್ಲಿ ಕೋವಿಡ್​-19 ಚಿಕಿತ್ಸೆಗಾಗಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಿದ್ದು, ಗುಣಮುಖರಾದ ರೋಗಿಗಳು 14 ದಿನಗಳ ನಂತರ ತಮ್ಮ ಪ್ಲಾಸ್ಮಾ ದಾನ ಮಾಡಬಹುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಹರಿಯಾಣ

ರಾಜ್ಯದ ಸ್ನಾತಕೋತ್ತರ ವೈದ್ಯಕೀಯ ಸಂಸ್ಥೆಯು ಸ್ಥಳೀಯವಾಗಿ ತಯಾರಿಸಲ್ಪಟ್ಟ ಕೊವಾಕ್ಸಿನ್ ವ್ಯಾಕ್ಸಿನ್ ಅನ್ನು ಮನುಷ್ಯರ ಮೇಲೆ ಪ್ರಯೋಗಿಸಲು ಸಜ್ಜಾಗಿದೆ. ಮೊದಲ ಹಂತದಲ್ಲಿ 375 ಹಾಗೂ ಎರಡನೇ ಹಂತದಲ್ಲಿ 750 ಜನರ ಮೇಲೆ ಕೋವಾಕ್ಸಿನ್ ಪ್ರಯೋಗ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಗುಜರಾತ್

ಈವರೆಗೆ 5 ಸಾವಿರಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದ್ದು, ಪ್ರತಿದಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಈ ಮಧ್ಯೆ ಸೂರತ್ ನಗರದಲ್ಲಿ ಅಹಮದಾಬಾದ್ ಮೀರಿಸಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.

ಹಿಮಾಚಲ ಪ್ರದೇಶ

ಕೋವಿಡ್ ಬಿಕ್ಕಟ್ಟಿನಿಂದ ವಿಧಿಸಲಾಗಿದ್ದ ಪ್ರಯಾಣ ನಿರ್ಬಂಧಗಳನ್ನು ತೆರವುಗೊಳಿಸಲು ಮುಂದಾಗಿರುವ ಹರಿಯಾಣ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರಾಜ್ಯದ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮತ್ತೆ ಹಳಿಗೆ ತರಲು ಪ್ರಯತ್ನ ನಡೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರಿಗಾಗಿ ಪ್ರಯಾಣ ಮಾರ್ಗಸೂಚಿಗಳನ್ನು ತಯಾರಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸೂಚಿಸಲಾಗಿದೆ.

ಜಾರ್ಖಂಡ್

ಅನ್​ಲಾಕ್​ 2ನೇ ಹಂತ ಮುಗಿಯುವಷ್ಟರಲ್ಲಿ ಶಾಲೆಗಳನ್ನು ಆರಂಭಿಸಲು ಜಾರ್ಖಂಡ್ ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸರ್ಕಾರಿ ಶಾಲೆಗಳ ಶಿಕ್ಷಕರು ಕೋವಿಡ್​-19 ಕುರಿತಾಗಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಈಗಾಗಲೇ ಆನ್ಲೈನ್ ತರಬೇತಿ ನೀಡಲಾಗಿದೆ.

ಬಿಹಾರ

ರಾಜ್ಯದಲ್ಲಿ ಕೋವಿಡ್​-19 ಗೆ ಬಲಿಯಾದವರ ಸಂಖ್ಯೆ​ 79 ದಾಟಿದೆ. ರಾಜ್ಯದಲ್ಲಿ ಶೇ 77.52 ರಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ.

ಉತ್ತರಾಖಂಡ್

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2984ಕ್ಕೆ ತಲುಪಿದೆ. ಇಂದು ಹೊಸದಾಗಿ 37 ಜನರಿಗೆ ಸೋಂಕು ತಗುಲಿದೆ. ಈಗಾಗಲೇ 2405 ರೋಗಿಗಳು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 510 ಸಕ್ರಿಯ ಕೋವಿಡ್​ ಪ್ರಕರಣಗಳು ರಾಜ್ಯದಲ್ಲಿವೆ.

ಒಡಿಶಾ

ಗುರುವಾರ ರಾಜ್ಯದಲ್ಲಿ ಮತ್ತಿಬ್ಬರು ಕೋವಿಡ್​ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 27 ಕ್ಕೇರಿದೆ. ಇಂದು 229 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 7,545 ಕ್ಕೇರಿದೆ. ಈಗಾಗಲೇ 5,353 ಜನ ಕೋವಿಡ್​ನಿಂದ ಗುಣಮುಖರಾಗಿದ್ದು, 2157 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ABOUT THE AUTHOR

...view details