ಕರ್ನಾಟಕ

karnataka

ETV Bharat / bharat

ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕೋವಿಡ್​ ಸೋಂಕಿತ

ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯ ಕಟ್ಟಡದ 3 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

COVID-19 patient
COVID-19 patient

By

Published : Aug 1, 2020, 4:28 PM IST

ಅಗರ್ತಲಾ (ತ್ರಿಪುರಾ): ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಆತನಿಗೆ ಕೋವಿಡ್​ ಸೋಂಕಿರುವುದು ದೃಢಪಟ್ಟಿತ್ತು. ಇದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈಶಾನ್ಯ ರಾಜ್ಯ ತ್ರಿಪುರಾದ ರಾಜಧಾನಿ ಅಗರ್ತಲಾದಲ್ಲಿ ನಡೆದಿದೆ.

ದಕ್ಷಿಣ ತ್ರಿಪುರ ಜಿಲ್ಲೆಯ ಮುಹುರಿಪುರ ಗ್ರಾಮದ 31 ವರ್ಷದ ವ್ಯಕ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಈ ವೇಳೆ ಆತನಿಗೆ ಕೋವಿಡ್​​ ಪರೀಕ್ಷೆ ನಡೆಸಲಾಗಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರಿಂದ ಬೇಸರಗೊಂಡ ಆತ ಗೋವಿಂದ್​ ಬಲ್ಲಭಪಂತ್​ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಾಥಮಿಕ ತನಿಖೆ ಪ್ರಕಾರ, ಆತ ಮಾನಸಿಕ ಖಿನ್ನತೆಗೊಳಗಾಗಿದ್ದನು ಎಂದು ತಿಳಿದು ಬಂದಿದೆ.

ABOUT THE AUTHOR

...view details