ಹೈದ್ರಾಬಾದ್: ಕೊರೊನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆ ಅದೇ ವಾರ್ಡ್ನಲ್ಲಿದ್ದ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ.
ಇಲ್ಲಿನ ಗಾಂಧಿ ಆಸ್ಪತ್ರೆಯಲ್ಲಿ ಒಂದೇ ಕುಟುಂಬದ ಒಬ್ಬ ಮಹಿಳೆ ಸೇರಿ ನಾಲ್ವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಅವರೆಲ್ಲರಿಗೂ ಒಂದೇ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ವ್ಯಕ್ತಿ ಮೃತಪಟ್ಟ ಹಿನ್ನಲೆ ಅವರ ಸಂಬಂಧಿಕರು ಸಾವಿಗೆ ವೈದ್ಯರನ್ನು ಹೊಣೆ ಮಾಡಿ ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ.