ಭೋಪಾಲ್(ಮಧ್ಯಪ್ರದೇಶ): ಕೋವಿಡ್-19 ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮಹಾಮಾರಿ ನಡುವೆಯೇ ರಾಜ್ಯಸಭೆಯಲ್ಲಿ ತೆರವಾಗಿರುವ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಕೊರೊನಾ ಸೋಂಕಿತ ಶಾಸಕರೊಬ್ಬರು ಪಿಪಿಇ ಕಿಟ್ ಧರಿಸಿ ಬಂದು ಮತ ಚಲಾಯಿಸಿರುವ ಘಟನೆಗೆ ಭೋಪಾಲ್ ವಿಧಾನಸಭೆ ಇಂದು ಸಾಕ್ಷಿಯಾಗಿದೆ.
ಪಿಪಿಇ ಕಿಟ್ ಧರಿಸಿ ಬಂದು ಮತ ಚಲಾಯಿಸಿದ ಕೊರೊನಾ ಸೋಂಕಿತ ಶಾಸಕ! - ಪಿಪಿಇ ಕಿಟ್
ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ಶಾಸಕರೊಬ್ಬರು ಪಿಪಿಇ ಕಿಟ್ ಧರಿಸಿ ಬಂದು ಮತ ಚಲಾಯಿಸಿರುವ ಘಟನೆಗೆ ಮಧ್ಯಪ್ರದೇಶದ ವಿಧಾನಸಭೆ ಇಂದು ಸಾಕ್ಷಿಯಾಗಿದೆ.
ಪಿಪಿಇ ಕಿಟ್ ಧರಿಸಿ ಬಂದು ಮತ ಚಲಾಯಿಸಿದ ಕೊರೊನಾ ಸೋಂಕಿತ ಶಾಸಕ
ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಶಾಸಕ ತಮ್ಮ ಹಕ್ಕು ಚಲಾಯಿಸಿ ಹೊರ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಸಿಬ್ಬಂದಿ ವಿಧಾನಸಭೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಬಿಜೆಪಿ ಶಾಸಕರು ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರೊಂದಿಗೆ ಬಂದು ಮತದಾನ ಮಾಡಿದರು. ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಕಮಲ್ ನಾಥ್ ಕೂಡ ಇತರೆ ಕಾಂಗ್ರೆಸ್ ಸದಸ್ಯರೊಂದಿಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.