ನವದೆಹಲಿ: ಕೊರೊನಾ ವೈರಸ್ ಸೋಂಕಿನ ಪರೀಕ್ಷೆಯ ಪ್ರಮಾಣವನ್ನು ಕಡ್ಡಾಯವಾಗಿ ಹೆಚ್ಚಿಸಬೇಕು. ಆಗ ಮಾತ್ರ ರೋಗದ ಗಂಭೀರತೆ ಗೊತ್ತಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಭಾರತದಲ್ಲಿ ಬೃಹತ್ ಪ್ರಮಾಣದ ಸೋಂಕು ಪರೀಕ್ಷೆ ನಡೆಸಿ: ಪ್ರಿಯಾಂಕಾ ಗಾಂಧಿ ಸಲಹೆ
ಭಾರತದಲ್ಲಿ ನೈಜ ಅಂಕಿ ಅಂಶಗಳು ಹೊರಬೀಳಬೇಕೆಂದರೆ ಬೃಹತ್ ಪ್ರಮಾಣದಲ್ಲಿ ಸೋಂಕು ಪರೀಕ್ಷೆ ನಡೆಸಬೇಕೆಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.
ಟ್ವಿಟರ್ನಲ್ಲಿ ಕೊರೊನಾ ಹಾಗೂ ಲಾಕ್ಡೌನ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಸೋಂಕಿನ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು. ನಂತರ ಫಲಿತಾಂಶಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ದೇಶದ ವೈದ್ಯಕೀಯ ಕ್ಷೇತ್ರಕ್ಕೆ ಮೂಲಸೌಕರ್ಯಗಳನ್ನು ನೀಡಬೇಕು. ಈ ಬಗ್ಗೆ ಆದಷ್ಟು ಬೇಗ ಕಾರ್ಯೋನ್ಮುಖವಾಗಬೇಕು'' ಎಂದು ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.
ವೈದ್ಯಕೀಯ ಸಿಬ್ಬಂದಿ ಜನರ ಜೀವವನ್ನು ಉಳಿಸುವ ಸೈನಿಕರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ ಉತ್ತರಪ್ರದೇಶದ ಬಾಂದಾದಲ್ಲಿ ಇವರಿಗೆ ಅನ್ಯಾಯವಾಗುತ್ತಿದ್ದು ಅಲ್ಲಿನ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.