ಕರ್ನಾಟಕ

karnataka

ETV Bharat / bharat

ಕೋವಿಡ್-19 ಬಿಕ್ಕಟ್ಟು: ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ನಿರ್ಧಾರ

ಕೋವಿಡ್-19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ತೀರ್ಮಾನಿಸಿದೆ.

Raj govt to ban sale of fireworks
ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ನಿರ್ಧಾರ

By

Published : Nov 2, 2020, 6:39 AM IST

ಜೈಪುರ(ರಾಜಸ್ಥಾನ): ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಸೃಷ್ಟಿಸಿದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಬ್ಬದ ಅವಧಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.

ಈ ಸವಾಲಿನ ಸಮಯದಲ್ಲಿ ಜನರ ಜೀವನವನ್ನು ರಕ್ಷಿಸುವುದು ಸರ್ಕಾರಕ್ಕೆ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ನವೆಂಬರ್ 16ರವರೆಗೆ ರಾಜ್ಯದ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿದೆ.

ಸಭೆಯಲ್ಲಿ ಅನ್​ಲಾಕ್ -6 ರ ಮಾರ್ಗಸೂಚಿಗಳ ಬಗ್ಗೆಯೂ ಮುಖ್ಯಮಂತ್ರಿ ಚರ್ಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಕೊರೊನಾ ವೈರಸ್ ಸೋಂಕಿತ ರೋಗಿಗಳ ಆರೋಗ್ಯವನ್ನು ಕಾಪಾಡಲು ಫಿಟ್‌ನೆಸ್ ಇಲ್ಲದೆ ಚಲಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.

ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ ಜನರು ದೀಪಾವಳಿಯಂದು ಪಟಾಕಿ ಬಳಸುವುದನ್ನು ತಪ್ಪಿಸಬೇಕು ಎಂದು ಸಿಎಂ ಹೇಳಿದ್ದಾರೆ.

ABOUT THE AUTHOR

...view details