ನವದೆಹಲಿ:ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಬೇಕು ಎಂದು ಪಾಕಿಸ್ತಾನ ಆರೋಗ್ಯ ಸಚಿವ ಜಾಫರ್ ಮಿರ್ಜಾ ಹೇಳಿದ್ದಾರೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜಂಟಿ ಕಾರ್ಯತಂತ್ರ ರೂಪಿಸುವ ಸಲುವಾಗಿ ಇಂದು ಸಾರ್ಕ್ ದೇಶಗಳ ಮುಖ್ಯಸ್ಥರು ನಡೆಸಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಜಾಫರ್ ಮಿರ್ಜಾ, ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಈ ಭೂ ಪ್ರದೇಶದಲ್ಲಿ ವಿಧಿಸಿರುವ ನಿರ್ಬಂಧವನ್ನು ತಕ್ಷಣವೇ ತೆಗೆದುಹಾಕಬೇಕು ಎಂದಿದ್ದಾರೆ.