ನವದೆಹಲಿ: ದೇಶದಲ್ಲಿ ಹೇರಲಾಗಿರುವ 21 ದಿನಗಳ ಲಾಕ್ಡೌನ್ ಏಪ್ರಿಲ್ 14ರಂದು ಮುಕ್ತಾಯಗೊಳ್ಳಲಿದ್ದು, ಇದು ಮುಗಿಯುತ್ತಿದ್ದಂತೆ ದೇಶದಲ್ಲಿ ರೈಲ್ವೆ ಸಂಚಾರ ಪುನಾರಂಭಗೊಳ್ಳಲಿದೆ ಎಂಬ ಮಾತು ಗಂಭೀರವಾಗಿ ಕೇಳಿ ಬಂದಿವೆ. ಆದರೆ ಆ ರೀತಿಯ ಯಾವುದೇ ಯೋಜನೆ ಇಲ್ಲ ಎಂಬುದು ಈಗ ಸ್ಪಷ್ಟವಾಗಿದೆ.
ಏಪ್ರಿಲ್ 14ರ ಬಳಿಕವೂ ರೈಲ್ವೆ ಸಂಚಾರ ಇಲ್ಲ... ಕೇಂದ್ರದ ಮಹತ್ವದ ನಿರ್ಧಾರ!? - Amit Shah
ದೇಶಾದ್ಯಂತ ಘೋಷಿಸಿರುವ 21 ದಿನಗಳ ಲಾಕ್ಡೌನ್ ಮುಕ್ತಾಯದ ಬಳಿಕ ಏಪ್ರಿಲ್ 15 ರಿಂದ ದೇಶದಲ್ಲಿ ರೈಲು ಸಂಚಾರ ಆರಂಭಗೊಳ್ಳುವುದು ಬಹುತೇಕ ಡೌಟ್ ಎನ್ನಲಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡುವ ಸಾಧ್ಯತೆ ಇದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚರ್ಚೆ ನಡೆಸಿದ್ದು, ರೈಲ್ವೆ ಸಂಚಾರ ಆರಂಭ ಮಾಡದಿರಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರ ಬರಬೇಕಿದೆ.
ಈ ಹಿಂದೆ ಕೂಡ ಲಾಕ್ಡೌನ್ ಮುಕ್ತಾಯಗೊಳ್ಳುತ್ತಿದ್ದಂತೆ ಏಪ್ರಿಲ್ 15ರಿಂದ ದೇಶದಲ್ಲಿ ರೈಲ್ವೆ ಸಂಚಾರ ಪುನಾರಂಭಗೊಳ್ಳಲ್ಲ ಎಂದು ಭಾರತೀಯ ರೈಲ್ವೆ ಇಲಾಖೆ ಕೂಡ ಸ್ಪಷ್ಟನೆ ನೀಡಿತ್ತು. ನಾಳೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಲಿದ್ದು, ಇದಾದ ಬಳಿಕ ಲಾಕ್ಡೌನ್ ಮುಂದುವರಿಸುವ ಕುರಿತು ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.