ನವದೆಹಲಿ: ಕೋವಿಡ್ ಪೀಡಿತ ರಾಷ್ಟ್ರಗಳ ಪೈಕಿ ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ 10 ಲಕ್ಷ ಗಡಿ ದಾಟಿದೆ. ಇತ್ತ ಸಾವಿನ ಸಂಖ್ಯೆ ಕೂಡ 25 ಸಾವಿರ ಗಡಿ ದಾಟಿದೆ.
ದೇಶದಲ್ಲಿ ಕೋವಿಡ್ ರಣಕೇಕೆ: 10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ...
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಮಿಲಿಯನ್ ಅಂದರೆ 10,03,832ಕ್ಕೆ ಹಾಗೂ ಮೃತರ ಸಂಖ್ಯೆ 25,602ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ 10 ಲಕ್ಷ ಕೋವಿಡ್ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 34,956 ಸೋಂಕಿತರು ಪತ್ತೆಯಾಗಿದ್ದು, 687 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಹಾಗೂ ಮೃತರ ಸಂಖ್ಯೆ 25,602ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ. 63ಕ್ಕೂ ಹೆಚ್ಚು ಅಂದರೆ 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 3,42,473 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Last Updated : Jul 17, 2020, 12:23 PM IST