ನವದೆಹಲಿ: ಭಾರತದಲ್ಲಿ ಕೊರೊನಾ ಮೃತರ ಸಂಖ್ಯೆ 1,53,339ಕ್ಕೆ ಏರಿಕೆಯಾಗಿದೆಯಾದರೂ ಸಹ ಪ್ರತಿನಿತ್ಯ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ನಿನ್ನೆ 155 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.44ಕ್ಕೆ ಇಳಿಕೆಯಾಗಿದೆ.
ಜನವರಿ 16ರಿಂದ ನಿನ್ನೆಯವರೆಗೆ 15,82,201 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಲಸಿಕೆಗಳು ಭಾರತದ ಕೊರೊನಾ ವಿರುದ್ಧದ ಹೋರಾಟಕ್ಕೆ ನಿರ್ಣಾಯಕ ಗೆಲುವು ತಂದುಕೊಡಲಿದೆ ಎಂದು ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 14,849 ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,06,54,533ಕ್ಕೆ ಏರಿಕೆಯಾಗಿದೆ. ಆದರೆ ಈ ಪೈಕಿ ಶೇ.96.83 ರಷ್ಟು ಅಂದರೆ 1,03,16,786 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಶೇ.1.73 ರಷ್ಟು (1,84,408) ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್
ಜನವರಿ 23ರ ವರೆಗೆ 19 ಕೋಟಿಗೂ ಹೆಚ್ಚು (19,17,66,871) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,81,752 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.