ಅಹಮದಾಬಾದ್: ಗುಜರಾತ್ನಲ್ಲಿ ಬುಧವಾರ 85 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೃತ ವೃದ್ಧೆಯ ಮಗನಿಗೆ ಕೋವಿಡ್-19 ಪಾಸಿಟಿವ್ ಕಂಡು ಬಂದಿದೆ. ಇವರು ವಿದೇಶದಿಂದ ಭಾರತಕ್ಕೆ ಮರಳಿದ್ದರು ಎಂದು ತಿಳಿದುಬಂದಿದೆ.
ಅಹಮದಾಬಾದ್: ಗುಜರಾತ್ನಲ್ಲಿ ಬುಧವಾರ 85 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೃತ ವೃದ್ಧೆಯ ಮಗನಿಗೆ ಕೋವಿಡ್-19 ಪಾಸಿಟಿವ್ ಕಂಡು ಬಂದಿದೆ. ಇವರು ವಿದೇಶದಿಂದ ಭಾರತಕ್ಕೆ ಮರಳಿದ್ದರು ಎಂದು ತಿಳಿದುಬಂದಿದೆ.
ಭಾರತಕ್ಕೆ ಬರುವಾಗ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಮಾರ್ಚ್ 22 ರಂದು ಅಹಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವೃದ್ಧೆ ಮೃತಪಟ್ಟಿದ್ದಾರೆ ಎಂದು ಗುಜರಾತ್ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಗುಜರಾತ್ನಲ್ಲಿ ಕೊರೊನಾ ವೈರಸ್ಗೆ ಈವರೆಗೆ ಇಬ್ಬರು ಬಲಿಯಾದಂತಾಗಿದೆ. 38 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.