ಕರ್ನಾಟಕ

karnataka

ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: CRPF ಯೋಧ, ಒಬ್ಬ ಬಾಲಕ ಸಾವು

ಉಗ್ರರ ದಾಳಿಗೆ ಒಬ್ಬ ಸಿಆರ್‌ಪಿಎಫ್ ಯೋಧ ಹಾಗೂ ಒಂಬತ್ತು ವರ್ಷದ ಬಾಲಕನೊಬ್ಬ ಬಲಿಯಾಗಿದ್ದಾರೆ.

CRPF Jawan, civilian killed in terrorist attack in Jammu and Kashmir
ಸಿಆರ್‌ಪಿಎಫ್

By

Published : Jun 26, 2020, 1:52 PM IST

ಶ್ರೀನಗರ: ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಯೋಧ ಹಾಗೂ ಒಂಬತ್ತು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಜಮ್ಮು- ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ನಡೆದಿದೆ.

ಅನಂತ್‌ನಾಗ್‌ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದ ಹೆದ್ದಾರಿ ಭದ್ರತೆಯಲ್ಲಿ ನಿಯೋಜನೆಗೊಂಡಿದ್ದ ಕೇಂದ್ರ ಮೀಸಲು ಪೊಲೀಸ್​ ಪಡೆಯ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಮಚೂ ಕುಲ್ಗಾಂನ ನಿವಾಸಿ ಮೊಹಮ್ಮದ್ ಯಾಸೀನ್ ಭಟ್ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.

ABOUT THE AUTHOR

...view details