ಶ್ರೀನಗರ(ಜಮ್ಮು ಕಾಶ್ಮೀರ):ಭಯೋತ್ಪಾದಕರ ಅಟ್ಟಹಾಸ ಜಮ್ಮು ಕಾಶ್ಮೀರದಲ್ಲಿ ಮಿತಿ ಮೀರುತ್ತಿದೆ. ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ಸೇನಾಪಡೆಯ ಮೇಲೆ ಗ್ರೆನೇಡ್ ಎಸೆದ ಕಾರಣದಿಂದ ಓರ್ವ ಯೋಧ ಗಾಯಗೊಂಡಿದ್ದಾನೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಅಚಬಲ್ ಪ್ರದೇಶದಲ್ಲಿ ಸಂಜೆ 6.50ರ ವೇಳೆಗೆ ಭಯೋತ್ಪಾದಕನೊಬ್ಬ ಸಿಆರ್ಪಿಎಫ್ ತಂಡದ ಮೇಲೆ ದಾಳಿ ನಡೆಸಿದ್ದಾನೆ. ಈ ವೇಳೆ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾನೆ.
ಓದಿ:ಹಿಮದಲ್ಲಿ ಸಿಲುಕಿದ್ದ ವಾಹನಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ ಸೇನೆ
ಗಾಯಗೊಂಡ ಯೋಧನನ್ನು ಆಸ್ಪತ್ರೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳದಲ್ಲಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಉನ್ನತ ಅಧಿಕಾರಿ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದಷ್ಟೇ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪಟ್ಟಣದ ಬಸ್ ನಿಲ್ದಾಣದ ಬಳಿ ಇದೇ ರೀತಿಯ ದಾಳಿ ನಡೆಸಲಾಗಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.