ಶ್ರೀನಗರ:ನವಕಾಡಲ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ - ಉಗ್ರರೊದಿಗೆ ಗುಂಡಿನ ಚಕಮಕಿ
ಶ್ರೀನಗರದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮುನ್ನೆಚರಿಕೆ ಕ್ರಮವಾಗಿ ನಗರದಲ್ಲಿ BSNL ಹೊರತುಪಡಿಸಿ ಎಲ್ಲಾ ಮೊಬೈಲ್ ಇಂಟರ್ನೆಟ್ ಮತ್ತು ಮೊಬೈಲ್ ಟೆಲಿಫೋನ್ ಸೇವೆ ಸ್ಥಗಿತಗೊಳಿಸಲಾಗಿದೆ.
ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಗುಂಡಿನ ದಾಳಿ ಪ್ರಾರಂಭವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಿಆರ್‌ಪಿಎಫ್ ಯೋಧ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ 2 ಗಂಟೆ ಸುಮಾರಿಗೆ ಪ್ರಾರಂಭವಾದ ಗುಂಡಿನ ದಾಳಿ ಸುಮಾರು ಐದು ಗಂಟೆಗಳ ಕಾಲ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಬಿಎಸ್‌ಎನ್‌ಎಲ್ ಪೋಸ್ಟ್ ಪೇಯ್ಡ್ ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಮತ್ತು ಮೊಬೈಲ್ ಟೆಲಿಫೋನ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಮುಗಿದಿದೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಉಗ್ರರಿಂದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.