ಅನಂತ ನಾಗ್:ಸಿಆರ್ಪಿಎಫ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಯೋಧ ತನಗೆ ತಾನೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಡೆದಿದೆ.
ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬೆಳಗಾವಿ ಯೋಧ - CRPF man shoots self,
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲಕ ಯೋಧ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಯೋಧ ಅಶ್ವೇರಪ್ಪಾ (34) ಕ್ಯಾಂಪ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ರಕ್ತಸಿಕ್ತವಾಗಿ ಬಿದ್ದಿದ್ದ ಯೋಧನನ್ನು ಸಹೋದ್ಯೋಗಿಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ದಿದ್ದರು. ಆದ್ರೆ ಯೋಧ ಅಶ್ವೇರಪ್ಪಾ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.