ನವದೆಹಲಿ:ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತು ದಟ್ಟವಾಗಿರುವಾಗಲೇ ಇಂದು ಬೆಳಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ.
ಸಚಿವ ಸಂಪುಟ ಸಭೆಗೂ ಮುನ್ನ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಭೇಟಿಯಾಗಿ ಮಾತುಕತೆ ನಡೆಸಿದ್ದರು.