ಕರ್ನಾಟಕ

karnataka

ETV Bharat / bharat

ಕೇರಳ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ - ತಿರುವನಂತಪುರಂ ವಿಮಾನ ನಿಲ್ದಾಣ

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿಂದೆ ಮೂವರನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

gold smuggling
gold smuggling

By

Published : Jul 16, 2020, 1:31 PM IST

ಕೊಚ್ಚಿ:ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಮಲಪ್ಪುರಂನ ಮೊಹಮ್ಮದ್ ಅನ್ವರ್ ಟಿಎಂ ಮತ್ತು ಸೈದಲವಿ ಇ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲು ಯುಎಇ ಕಾನ್ಸುಲೇಟ್‌ನ ಮಾಜಿ ಪ್ರೊ. ಸರಿತ್ ಪಿ ಎಸ್, ಕಾನ್ಸುಲೇಟ್‌ನ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಸ್ವಪ್ನಾ ಸಂತೋಷ್ ಮತ್ತು ಅವರ ಸ್ನೇಹಿತ ಸಂದೀಪ್ ನಾಯರ್ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಇದೀಗ ಬಂಧನಕ್ಕೊಳಗಾಗಿರುವ ಆರೋಪಿಗಳು ವ್ಯಾಪಾರಿಗಳಿಗೆ ಚಿನ್ನವನ್ನು ತಲುಪಿಸಿದ್ದರು. ಪ್ರಕರಣದ ಮೊದಲ ಆರೋಪಿ ಸರಿತ್ ಹತ್ತು ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ABOUT THE AUTHOR

...view details