ಕರ್ನಾಟಕ

karnataka

By

Published : Jan 21, 2021, 6:25 AM IST

ETV Bharat / bharat

ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಸಾಧ್ಯತೆ

ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಪಕ್ಷದ ಅಧ್ಯಕ್ಷರನ್ನು ಆಯ್ಕೆಮಾಡುವ ಚುನಾವಣೆಯ ವೇಳಾಪಟ್ಟಿಯನ್ನು ನಿರ್ಧರಿಸುವ ಸಾಧ್ಯತೆ ಇದೆ.

CWC meeting on Jan 22
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಮತ್ತು ಪಕ್ಷದ ಅಧ್ಯಕ್ಷರನ್ನು ಆಯ್ಕೆಮಾಡುವ ಚುನಾವಣೆ ವೇಳಾಪಟ್ಟಿಯನ್ನು ನಿರ್ಧರಿಸಲು ಜನವರಿ 22 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ನಡೆಯಲಿದೆ.

ಸಭೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ದಿನಾಂಕದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆಯಲಿರುವ ಈ ಸಭೆ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗುವ ಒಂದು ವಾರದ ಮೊದಲು ನಡೆಯುತ್ತಿದೆ ಮತ್ತು ಅಧಿವೇಶನದಲ್ಲಿ ಪಕ್ಷವು ಎತ್ತುವ ವಿಷಯಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.

ಸಭೆಯಲ್ಲಿ ರೈತರ ಆಂದೋಲನ ಮತ್ತು 'ಸೋರಿಕೆಯಾದ ಮೆಸೇಜ್​ಗಳ' ಕುರಿತು ಚರ್ಚಿಸುವ ನಿರೀಕ್ಷೆಯಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ ಕುರಿತು ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ.

ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರವು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಚುನಾವಣೆಗೆ ಸಿದ್ಧ ಎಂದು ಟಿಪ್ಪಣಿ ಸಲ್ಲಿಸಿದ ನಂತರ ಸಿಡಬ್ಲ್ಯೂಸಿ ಸಭೆ ಕರೆಯಲಾಗಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ 23 ನಾಯಕರ ಗುಂಪು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಆಂತರಿಕ ಚುನಾವಣೆಗಳನ್ನು ಬ್ಲಾಕ್‌ನಿಂದ ಪಕ್ಷದ ಮುಖ್ಯಸ್ಥರ ಮಟ್ಟಕ್ಕೆ ಮತ್ತು "ಪೂರ್ಣ ಸಮಯದ" ಸಕ್ರಿಯ ನಾಯಕತ್ವಕ್ಕೆ ಒತ್ತಾಯಿಸಿತ್ತು. ಅವರು ಸಿಡಬ್ಲ್ಯೂಸಿಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದರು. ಆರು ತಿಂಗಳೊಳಗೆ ಚುನಾವಣೆ ನಡೆಯಬೇಕು ಎಂದು ಸೋನಿಯಾ ಗಾಂಧಿ ಬಯಸಿದ್ದಾರೆ.

ABOUT THE AUTHOR

...view details