ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಚಂಡಮಾರುತದಿಂದ ಉಂಟಾದ ಹಾನಿಯಿಂದ ಪ್ರಾಣ ಕಳೆದುಕೊಂಡ ಸಂತ್ರಸ್ತರ ಕುಟುಂಬಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಗಾ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಚಂಡಮಾರುತದಿಂದ ತೀವ್ರ ಹಾನಿಯುಂಟಾಗಿದೆ ಹಾಗೂ ಅಲ್ಲಿನ ಜನರು ತೊಂದರೆಗೊಳಗಾಗಿದ್ದಾರೆ. ಈ ಚಂಡಮಾರುತಕ್ಕೆ ಬಲಿಯಾದವರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತಿದ್ದೇನೆ ಹಾಗೂ ಇದರಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಈ ಎರಡು ರಾಜ್ಯಗಳ ಧೈರ್ಯಶಾಲಿ ಜನರಿಗೆ ನನ್ನ ಬೆಂಬಲವನ್ನು ನೀಡುತ್ತೇನೆ ಎಂದು ಹೇಳಿದ್ದಾರೆ.