ಭುವನೇಶ್ವರ:ಫಣಿ ಚಂಡಮಾರುತ ಇಂದು ಬೆಳಗ್ಗೆ 9.30ರ ಸುಮಾರಿಗೆ ಒಡಿಶಾದ ಪುರಿ ಪ್ರದೇಶಕ್ಕೆ ಅಪ್ಪಳಿಸಲಿದ್ದು ರಾಜ್ಯದೆಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಈಗಾಗಲೇ ಒಡಿಶಾದಲ್ಲಿ ಹನ್ನೊಂದು ಲಕ್ಷ ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

ಸದ್ಯ 170ರಿಂದ 180 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಇದು 200 ಕಿ.ಮೀ ವರ್ಧಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಒಡಿಶಾದಲ್ಲಿ ಸುಮಾರು 223 ರೈಲುಗಳ ಸಂಚಾರವನ್ನು ಮೇ.4ರ ಮಧ್ಯಾಹ್ನದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಭುವನೇಶ್ವರ ವಿಮಾನ ನಿಲ್ದಾಣವನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ.
ಫಣಿ ಚಂಡಮಾರುತ ಒಡಿಶಾ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರತಾಪ ತೋರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಏರ್ಪೋರ್ಟ್ನಲ್ಲೂ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.