ನವದೆಹಲಿ:ಟ್ರ್ಯಾಕ್ಟರ್ ಹಾಗೂ ಕೃಷಿ ಸಂಬಂಧಿತ ಯಂತ್ರೋಪಕರಣಗಳ ಬೆಲೆ ಏರಿಕೆ ಕುರಿತ ಸಂಬಂಧ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ ಇಂದು ಲೋಕಸಭೆಯಲ್ಲಿ ಗಮನ ಸೆಳೆದಿದ್ದಾರೆ.
ಕೃಷಿ ಯಂತ್ರೋಪಕರಣಗಳ ದುಬಾರಿ ಮಾರಾಟಕ್ಕೆ ಕಡಿವಾಣ ಹಾಕಿ: ಲೋಕಸಭೆಯಲ್ಲಿ ಜಿಎಂ ಸಿದ್ದೇಶ್ವರ್ ಒತ್ತಾಯ
ಡೀಲರ್‌ಗಳು ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಎಂಆರ್‌ಪಿ ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಹೆಚ್ಚಿನ ಮಾರಾಟಕ್ಕೆ ಕಡಿವಾಣ ಹಾಕಿ ರೈತರ ನೆರವಿಗೆ ಬರಬೇಕೆಂದು ಲೋಕಸಭೆಯಲ್ಲಿ ಸಂಸದ ಜಿಎಂ ಸಿದ್ದೇಶ್ವರ್ ಕಲಾಪದ ಗಮನ ಸೆಳೆದಿದ್ದಾರೆ.
ಎಂಆರ್‌ಪಿಗಿಂತ ಹೆಚ್ಚಿನ ಬೆಲೆಗೆ ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಚಿವರಿಗೆ ಒತ್ತಾಯಿಸಿದ್ದಾರೆ. ಕಾರುಗಳ ಬೆಲೆಯನ್ನು ವೆಬ್‌ಸೈಟ್‌ಗಳಲ್ಲಿ ಪ್ರದರ್ಶಿಸಲಾಗುತ್ತದೆ. ಅದೇ ರೀತಿ ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣಗಳ ಬೆಲೆಯನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಡೀಲರ್‌ಗಳು ಎಂಆರ್‌ಪಿ ಗಿಂತ ಹೆಚ್ಚಿನ ಬೆಲೆಗೆ ಯಂತ್ರೋಪಕರಣಗಳನ್ನು ಮಾರಾಟ ಮಾಡಿದ್ದರೆ ಅಂತವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಹೆಚ್ಚಿನ ಮಾರಾಟಕ್ಕೆ ಕಡಿವಾಣ ಹಾಕಿ ರೈತರ ನೆರವಿಗೆ ಬರಬೇಕೆಂದು ಕಲಾಪದ ಗಮನ ಸೆಳೆದರು.