ಗೊರಖ್ಪುರ: ಉತ್ತರಪ್ರದೇಶದ ಗೋರಖ್ಪುರದಲ್ಲಿ ಕಿವಿ ಕೇಳಿಸದ ಯುವತಿಯ ಮೇಲೆ ಆಕೆಯ ಸಹೋದರನ ಗೆಳೆಯನೇ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.
ಹಥ್ರಾಸ್ ಅತ್ಯಾಚಾರ ಬೆನ್ನಲ್ಲೇ ಉ.ಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ - ಅಣ್ಣನ ಸ್ನೇಹಿತನಿಂದಲೇ ಅತ್ಯಾಚಾರ
ಕಾಮುಕ ಯುವಕನೊಬ್ಬ ತನ್ನ ಸ್ನೇಹಿತನ ಕಿವುಡ ತಂಗಿಯ ಮೇಲೆ ಅತ್ಯಾಚಾರಗೈದ ಘಟನೆ ಉತ್ತರಪ್ರದೇಶದ ಚೌರಿಚೌರಾದಲ್ಲಿ ನಡೆದಿದೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪಿಂಟು ಸಾಹ್ನಿ ಎಂಬಾತನ ವಿರುದ್ಧ ಅತ್ಯಾಚಾರ ದೂರು ನೀಡಿದ್ದಾರೆ. ಕಿವುಡ ಬಾಲಕಿಯ ತಾಯಿ ಮಾರುಕಟ್ಟೆಗೆ ಹೋಗಿದ್ದರು. ಅಣ್ಣ ಮನೆಯಲ್ಲಿ ಇರಲಿಲ್ಲ. ಈ ವೇಳೆ ಮನೆಗೆ ಬಂದ ಯುವಕ ಯುವತಿಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ತಾಯಿ ವಾಪಸ್ಸಾಗುತ್ತಲೇ ಸಂತ್ರಸ್ತೆ ನಡೆದ ಘಟನೆಯನ್ನು ತಿಳಿಸಿದ್ದಾಳೆ. ತಕ್ಷಣ ತಾಯಿ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಚಿತ್ರಹಿಂಸೆ ನೀಡಲಾಗಿತ್ತು. ಈ ಯುವತಿ 3 ದಿನಗಳ ಬಳಿಕ ಸಾವನ್ನಪ್ಪಿದ್ದು, ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.