ಇಡುಕ್ಕಿ: ಕೇರಳದ ಇಡುಕ್ಕಿಯ ರಾಜಮಾಲಾದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಇಡುಕ್ಕಿ ಭೀಕರ ಭೂಕುಸಿತ: ಸಾವಿನ ಸಂಖ್ಯೆ 21ಕ್ಕೆ ಏರಿಕೆ - Rajamala landslide
ಮತ್ತೆ ಮೂವರ ಮೃತದೇಹ ಸಿಕ್ಕಿದ್ದು, ಕೇರಳದ ಇಡುಕ್ಕಿಯಲ್ಲಿ ನಿನ್ನೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಇಡುಕ್ಕಿ ಭೀಕರ ಭೂಕುಸಿತ
ಇದೀಗ ಮತ್ತೆ ಮೂವರ ಮೃತದೇಹ ಸಿಕ್ಕಿದ್ದು, ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇನ್ನಷ್ಟು ಜೆಸಿಬಿಗಳನ್ನು ಸ್ಥಳಕ್ಕೆ ಕರೆತರಲಾಗಿದ್ದು, ಕಾಣೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆದರೆ, ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕಾರ್ಯಾಚರಣೆಗೆ ಅಡ್ಡಿಪಡಿಸುತ್ತಿದೆ.
ಇನ್ನು ಪೆಟ್ಟಿಮುಡಿ ಪ್ರದೇಶಕ್ಕೆ ಸಚಿವ ಎಂ.ಎಂ. ಮಣಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.