ಕರ್ನಾಟಕ

karnataka

ETV Bharat / bharat

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ: ಇವತ್ತು ಸಿಗುತ್ತಾ ರಿಲೀಫ್​? - ಡಿಕೆಶಿವಕುಮಾರ ಮನಿ ಲಾಂಡರಿಂಗ್ ಪ್ರಕರಣ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರವಾಗಿ ದೆಹಲಿ ಹೈಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸುವ ಸಾಧ್ಯತೆ ದಟ್ಟವಾಗಿದೆ.

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ

By

Published : Oct 23, 2019, 8:34 AM IST

ನವದೆಹಲಿ/ ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರವಾಗಿ ದೆಹಲಿ ಹೈಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸುವ ಸಾಧ್ಯತೆ ದಟ್ವವಾಗಿದೆ.

ಡಿ ಕೆ ಶಿವಕುಮಾರ್ ಅವರನ್ನು ಸೆ. 3ರಂದು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿತ್ತು. ಬಳಿಕ ಅ.17ರಂದು ನ್ಯಾಯಾಲಯವು ತನ್ನ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. ಅ. 25 ರಿಂದ ಡಿಕೆಶಿಯನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ

ತಾವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಡಿಯ ರೋಸ್​ ಅವೆನ್ಯೂ ಕೋರ್ಟ್​ ತಿರಸ್ಕರಿಸಿದ ನಂತರ, ಡಿಕೆಶಿ ದೆಹಲಿ ಹೈಕೋರ್ಟ್‌ ಮೆಟ್ಟಿಲೆರಿದ್ದರು. ಈ ಕುರಿತ ವಿಚಾರಣೆಯ ಸಮಯದಲ್ಲಿ ಜಾರಿ ನಿರ್ದೇಶನಾಲಯ 317 ಬ್ಯಾಂಕ್ ಖಾತೆಗಳನ್ನು ಒಳಗೊಂಡಿರುವ ಪಟ್ಟಿ ಸೇರಿದಂತೆ ಹಲವಾರು ದಾಖಲೆಗಳನ್ನು ಹೈಕೋರ್ಟ್ ಮುಂದೆ ಹಾಜರುಪಡಿಸಿತ್ತು.

ABOUT THE AUTHOR

...view details