ಶ್ರೀನಗರ: ಜಮ್ಮುಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕುಪ್ವಾರ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರೊಂದಿಗೆ ಸಂವಾದ ನಡೆಸಿದರು.
ಯೋಧರೊಂದಿಗೆ ಕೇಂದ್ರ ರಕ್ಷಣಾ ಸಚಿವರು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭದ್ರತಾ ಪಡೆ ಹೊಂದಿರುವ ಮುನ್ನೆಚ್ಚರಿಕಾ ಕ್ರಮಗಳ ಮಾಹಿತಿ ಪಡೆದುಕೊಂಡ ಅವರು, ದುಷ್ಕೃತ್ಯದಲ್ಲಿ ಭಾಗಿಯಾಗುವ ಎದುರಾಳಿಗಳಿಗೆ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದರು.
ಬಳಿಕ ತಮ್ಮ ಭೇಟಿಯ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ರಕ್ಷಣಾ ಸಚಿವರು, ಕಠಿಣ ಪರಿಸ್ಥಿತಿಯಲ್ಲೂ ನಮ್ಮ ದೇಶ ರಕ್ಷಣೆ ಮಾಡುತ್ತಿರುವ ಧೈರ್ಯಶಾಲಿ ಸೈನಿಕರು ನಮ್ಮ ಹೆಮ್ಮೆ ಎಂದಿದ್ದಾರೆ.
ನಿನ್ನೆ ಲಡಾಖ್ನ ಲೇಹ್ಗೆ ಭೇಟಿ ನೀಡಿದ್ದ ಸಿಂಗ್, ಇಂದು ಜಮ್ಮುಕಾಶ್ಮೀರದಲ್ಲಿ ಯೋಧರೊಂದಿಗೆ ಸಂವಾದ ನಡೆಸಿ, ಧೈರ್ಯ ತುಂಬಿದರು.
ಇದೇ ವೇಳೆ, ಸೇನೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗಡಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಿದರು.