ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದ್ದು, ಹೀಗಾಗಿ ಕೇಜ್ರಿವಾಲ್ ನಿಟ್ಟುಸಿರು ಬಿಟ್ಟಿದ್ದಾರೆ.
ಜ್ವರ ಹಾಗೂ ಗಂಟಲು ನೋವಿನಿಂದಾಗಿ 51 ವರ್ಷದ ಸಿಎಂ ಕೇಜ್ರಿವಾಲ್ ಇಂದು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಈಗ ಚೇತರಿಸಿಕೊಂಡಿದ್ದು, ಜ್ವರ ಕಡಿಮೆಯಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿದೆ.
TAGGED:
arvind kejriwal