ನವದೆಹಲಿ:ದೇಶವ್ಯಾಪಿ ಇಂದಿನಿಂದ ನಿರ್ಬಂಧಗಳನ್ನು ಸಡಿಲಿಸಿ 3ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಮತ್ತೊಂದು ಕಡೆ ದೆಹಲಿಯ ಬಹುತೇಕ ಪ್ರದೇಶಗಳಲ್ಲಿ ಕರ್ಫ್ಯೂ ಸಡಿಲಿಸಿ ಮುಖ್ಯಮಂತ್ರಿ ಕೇಜ್ರಿವಾಲ್ ಆದೇಶ ಮಾಡಿದ್ದರು. ನಿನ್ನೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಅವರು ಕೊರೊನಾ ಜೊತೆ ಜೀವಿಸಲು ತಾವು ಸಿದ್ಧ ಎಂದಿದ್ದರು.
ಸಿಎಂ ಹೇಳಿಕೆ ನೀಡ್ತಿದ್ದಂತೆ ಇಂದು ರಸ್ತೆಗಿಳಿದ ದೆಹಲಿ ನಿವಾಸಿಗಳು ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಮನಬಂದಂತೆ ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್ ಸುದ್ದಿಗೋಷ್ಠಿ ಇದರ ಪರಿಣಾಮ ಅರಿತಿರುವ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿ ಮತ್ತೊಮ್ಮೆ ದೆಹಲಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೆಲ ಪ್ರದೇಶಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ರಸ್ತೆಗಿಳಿದಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿ ಬೇಕಾಬಿಟ್ಟಿಯಾಗಿ ವರ್ತಿಸಿದರೆ ಅಂತಹ ಪ್ರದೇಶಗಳನ್ನು ಪ್ರದೇಶಗಳನ್ನು ಮುಲಾಜಿಲ್ಲದೆ ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗುವುದು. ಇದ್ರ ಜೊತೆಗೆ ನೀಡಲಾಗಿರುವ ಸಡಿಲಿಕೆಗಳನ್ನು ಹಿಂಪಡೆದುಕೊಳ್ಳಲಾಗುವುದು ಎಂದಿದ್ದಾರೆ.
ಮನೆಯಿಂದ ಹೊರಬರಬೇಕಾದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದೆಹಲಿ ಸರ್ಕಾರದ ಲಾಕ್‌ಡೌನ್ ಸಡಿಲಿಕೆ ನಿರ್ಧಾರಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಸಮಾಧಾನ ವ್ಯಕ್ತಪಡಿಸಿದ್ದರು.