ನವದೆಹಲಿ:ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸ್ವಲ್ಪ ಮಟ್ಟಿನ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ದೆಹಲಿ ಸಿಎಂ ಕೇಜ್ರಿವಾಲ್ಗೆ ಜ್ವರ, ನೆಗಡಿ: ನಾಳೆ ಕೊರೊನಾ ಟೆಸ್ಟ್
ನಿನ್ನೆ ಮಧ್ಯಾಹ್ನದಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜ್ವರ ಹಾಗೂ ನೆಗಡಿ ಕಾಣಿಸಿಕೊಂಡಿದ್ದು, ನಾಳೆ ಮಧ್ಯಾಹ್ನ ಕೊರೊನಾ ಸೋಂಕು ಪರೀಕ್ಷೆ ನಡೆಯಲಿದೆ.
ದೆಹಲಿ ಸಿಎಂ ಕೇಜ್ರಿವಾಲ್
ಭಾನುವಾರ ಮಧ್ಯಾಹ್ನದಿಂದ ಜ್ವರ ಹಾಗೂ ನೆಗಡಿಯಿಂದ ಕೇಜ್ರಿವಾಲ್ ಬಳಲುತ್ತಿದ್ದು, ಎಲ್ಲಾ ಸಭೆ, ಸಮಾರಂಭಗಳನ್ನು ರದ್ದು ಮಾಡಿದ್ದಾರೆ. ಜೊತೆಗೆ ರಾಜಕೀಯ ವ್ಯಕ್ತಿಗಳ, ಅಧಿಕಾರಿಗಳ ಭೇಟಿಯನ್ನು ಮುಂದೂಡಿದ್ದಾರೆ.
ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ ಕೇಜ್ರಿವಾಲ್ಗೆ ಕೊರೊನಾ ಸೋಂಕಿನ ಪರೀಕ್ಷೆ ನಡೆಯಲಿದ್ದು, ಸದ್ಯಕ್ಕೆ ಅವರು ತಮ್ಮ ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.