ನವದೆಹಲಿ :ಲಾಕ್‌ಡೌನ್ ಸಮಯದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಗತ್ಯ ಸೇವೆಗಳಾದ ತರಕಾರಿ, ದಿನಸಿ ಮತ್ತು ಹಾಲು ಮಾರಾಟಗಾರರಿಗೆ ಇ-ಪಾಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಅಗತ್ಯ ಸೇವೆ ಮಾರಾಟಗಾರರಿಗೆ ಇ-ಪಾಸ್ : ಅರವಿಂದ್ ಕೇಜ್ರಿವಾಲ್ - ನವದೆಹಲಿಯಲ್ಲಿ ಲಾಕ್‌ಡೌನ್ ಲೇಟೆಸ್ಟ್ ನ್ಯೂಸ್
* ಕಟ್ಟುನಿಟ್ಟಾಗಿ ಲಾಕ್‌ಡೌನ್ ಅನುಷ್ಠಾನ * ಜನರು ಮನೆಯಲ್ಲೇ ಇರಬೇಕು * ಯಾವುದೇ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವ್ಯಾಪಿ 21 ದಿನಗಳ ಲಾಕ್‌ಡೌನ್ ಘೋಷಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ-ಪಾಸ್ಗಳಿಗಾಗಿ ಸಹಾಯವಾಣಿ ಸಂಖ್ಯೆಯನ್ನೂ ನೀಡಲಾಗುವುದು ಎಂದು ಹೇಳಿದರು.
ಜನರು ಗಾಬರಿಯಾಗಿ ಖರೀದಿ ಮಾಡುವುದನ್ನು ಬಿಡಿ ಎಂದು ಮನವಿ ಮಾಡಿದ್ದಾರೆ. ಹಾಲು, ತರಕಾರಿ, ದಿನಸಿ ಮತ್ತು ಔಷಧಿಗಳಂತಹ ದೈನಂದಿನ ಬಳಕೆಯ ವಸ್ತುಗಳ ಅಂಗಡಿಗಳು ತೆರೆದಿರುತ್ತವೆ ಎಂದು ಭರವಸೆ ನೀಡಿದರು. ರಾಷ್ಟ್ರ ರಾಜಧಾನಿಯಲ್ಲಿ ಕಟ್ಟುನಿಟ್ಟಾಗಿ ಲಾಕ್‌ಡೌನ್ ಅನುಷ್ಠಾನಗೊಳಿಸುವುದು. ಜನರು ಮನೆಯಲ್ಲೇ ಇರಬೇಕೆಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮನವಿ ಮಾಡಿದ್ದಾರೆ. ಇತ್ತ ಯಾವುದೇ ಸಮಸ್ಯೆಗಳಿದ್ದಲ್ಲಿ ದೆಹಲಿ ಪೊಲೀಸ್ ಆಯುಕ್ತರ ಕಚೇರಿ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.