ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸುಭಾಶ್ ಚೋಪ್ರಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸೋಲಿನ ಹೊಣೆ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಭಾಶ್ ಚೋಪ್ರಾ ರಾಜೀನಾಮೆ - delhi election result
ದೆಹಲಿ ವಿಧಾನಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುಭಾಶ್ ಚೋಪ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಂಗಳವಾರ ಪ್ರಕಟಗೊಂಡ ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿ ಹೀನಾಯ ಸೋಲು ಕಂಡಿದೆ. ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ, ಫಲಿತಾಂಶ ಮಾತ್ರ ಎಲ್ಲರನ್ನೂ ತಲೆಕೆಳಗಾಗಿಸಿದೆ.
70 ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 63 ಸ್ಥಾನಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಅತ್ತ ಬಿಜೆಪಿ ಕೇವಲ 7 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಇತ್ತ ಕಾಂಗ್ರೆಸ್ ಖಾತೆಯನ್ನೇ ತೆರೆಯಲಿಲ್ಲ. ಹೀಗಾಗಿ ಸುಭಾಶ್ ಚೋಪ್ರಾ ಅವರು ಪೋಸ್ಟ್ ಮೂಲಕ ಹೈಕಮಾಂಡ್ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.