ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನಾವಧಿ ವಿಸ್ತರಣೆಗೊಂಡಿದೆ.
ಡಿ.ಕೆ ಶಿವಕುಮಾರ್ ನ್ಯಾಯಂಗ ಬಂಧನ ವಿಸ್ತರಣೆ; ಅ.15ರ ತನಕ ಜೈಲೇ ಗತಿ - ತಿಹಾರ್ ಜೈಲು
ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.
ಡಿಕೆ ಶಿವಕುಮಾರ್
ಅಕ್ಟೋಬರ್ 15 ರ ವರೆಗೆ ಡಿಕೆಶಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಇಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮಧ್ಯೆ ಅಕ್ಟೋಬರ್ 4 ಮತ್ತು 5 ರಂದು ತಿಹಾರ್ ಜೈಲಿನಲ್ಲೇ ಅವರ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಕೋರ್ಟ್ ಅನುಮತಿ ನೀಡಿದೆ.
ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಸಂಗ್ರಹ ಆರೋಪದ ಮೇಲೆ ಬಂಧಿತರಾಗಿರುವ ಡಿಕೆ ಶಿವಕುಮಾರ್ ಬಂಧನ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಾರಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಎದುರು ಅವರನ್ನು ಹಾಜರುಪಡಿಸಿದರು.