ನವದೆಹಲಿ:ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಕಳೆದ ವಾರ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಅವರನ್ನು ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ವರ, ಉಸಿರಾಟದ ತೊಂದರೆ... ಆಸ್ಪತ್ರೆಗೆ ದಾಖಲಾದ ಡಿಸಿಎಂ ಸಿಸೋಡಿಯಾ! - ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲು ಸಿಸೋಡಿಯಾ
ಕಳೆದ ವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಅವರು ಮನೆಯಲ್ಲಿ ಐಸೋಲೇಷನ್ಗೊಳಗಾಗಿದ್ದರು.
Delhi deputy CM Manish Sisodia
ಸೆಪ್ಟೆಂಬರ್ 14ರಂದು ಇವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ವೇಳೆ ಹೋಂ ಕ್ವಾರಂಟೈನ್ಗೊಳಗಾಗಿದ್ದ ಡಿಸಿಎಂ ಅವರಲ್ಲಿ ಇದೀಗ ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
48 ವರ್ಷದ ಸಿಸೋಡಿಯಾ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.