ಕರ್ನಾಟಕ

karnataka

ETV Bharat / bharat

ದೆಹಲಿ ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ - ದೆಹಲಿ ಆಕಾಶವಾಣಿ ಭವನ

ದೆಹಲಿಯ ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ ಎಂದು ಡಿಎಫ್‌ಎಸ್ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

Fire at Delhi Akashwani Bhawan
ದೆಹಲಿ ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ

By

Published : Jan 24, 2021, 10:21 AM IST

ನವದೆಹಲಿ:ಇಂದು ಬೆಳ್ಳಂಬೆಳಗ್ಗೆ ದೆಹಲಿಯ ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಎಂಟು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಭವನದ ಕೋಣೆಯ ಸಂಖ್ಯೆ 101ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವಾಸಕ್ಕೆ ಬಂದಿದ್ದ ಯುವತಿ ಆನೆ ದಾಳಿಗೆ ಬಲಿ

ಕೆಲವು ವಿದ್ಯುತ್ ಉಪಕರಣಗಳಿಂದ ಈ ಅವಘಡ ಸಂಭವಿಸಿದೆ ಎಂದು ಅತುಲ್ ಗರ್ಗ್​ ಹೇಳಿದ್ದಾರೆ.

ABOUT THE AUTHOR

...view details