ನವದೆಹಲಿ:ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರ ಇಡಿ ವಿಚಾರಣೆಗೆ ಸಂಬಂಧಿಸಿದಂತೆ ಇಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಲಿದೆ.
ಡಿಕೆಶಿ ತಾಯಿ, ಪತ್ನಿಯ ಇಡಿ ವಿಚಾರಣೆ: ಇಂದು ದೆಹಲಿ ಹೈಕೋರ್ಟ್ನಿಂದ ತೀರ್ಪು
ಉಪಚುನಾವಣೆಯ ಪ್ರಚಾರದಲ್ಲಿ ಬ್ಯುಸಿ ಆಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ತನ್ನ ತೀರ್ಪು ಪ್ರಕಟಿಸಲಿದೆ.
ಡಿಕೆಶಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಅವರ ತಾಯಿ ಹಾಗೂ ಪತ್ನಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿತ್ತು. ತಮ್ಮ ತಾಯಿಗೆ ವಯುಸ್ಸಾದ ಕಾರಣ ಓಡಾಟ ಅಸಾಧ್ಯ ಎಂದು ಡಿಕೆಶಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಡಿಕೆಶಿ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾ.ಬ್ರಿಜೇಶ್ ಸೇಥಿ ನೇತೃತ್ವದ ಏಕಸದಸ್ಯ ಪೀಠ ಇಂದು ತನ್ನ ತೀರ್ಪು ಪ್ರಕಟಿಸಲಿದೆ. ತಮ್ಮ ತಾಯಿ ಹಾಗೂ ಪತ್ನಿಯನ್ನು ದೆಹಲಿ ಬದಲಾಗಿ ಬೆಂಗಳೂರಿನಲ್ಲೇ ವಿಚಾರಣೆ ನಡೆಸಿ ಎನ್ನುವ ಡಿಕೆಶಿ ಮನವಿಯನ್ನು ಕೋರ್ಟ್ ಪುರಸ್ಕರಿತ್ತೋ ಇಲ್ಲವೋ ಎನ್ನುವುದು ಇಂದು ಗೊತ್ತಾಗಲಿದೆ. ಈ ನಡುವೆ ಐಟಿ ಜಾಮೀನಿನ ಮೇಲೆ ಹೊರಗೆ ಇರುವ ಡಿಕೆಶಿಗೆ ಮೊನ್ನೆಯಷ್ಟೇ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ತುರ್ತಾಗಿ ಐಟಿ ಅಧಿಕಾರಿಗಳ ಶೋಕಾಸ್ ನೋಟಿಸ್ಗೆ ಉತ್ತರಿಸಿ ಬಂದಿದ್ದರು.