ಕರ್ನಾಟಕ

karnataka

By

Published : Feb 11, 2020, 12:54 PM IST

ETV Bharat / bharat

ಜಾಮಿಯಾ ವಿವಿ ಹಿಂಸಾಚಾರ ತನಿಖೆ:  ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್​

ಕಳೆದ ಡಿಸೆಂಬರ್​ 15ರಂದು ಜಾಮಿಯಾ ವಿಶ್ವವಿದ್ಯಾಲಯದ ಗಲಭೆ ಪ್ರಶ್ನಿಸಿ ವಿದ್ಯಾರ್ಥಿಯೊಬ್ಬ ಅರ್ಜಿ ಸಲ್ಲಿಸಿದ್ದು, ದೆಹಲಿ ನ್ಯಾಯಾಲಯವು ಈ ಬಗ್ಗೆ ಕೇಂದ್ರದ ನಿಲುವು ತಿಳಿಸುವಂತೆ ನೋಟಿಸ್ ಜಾರಿ ಮಾಡಿದೆ.

Delhi HC
ದೆಹಲಿ ಹೈಕೋರ್ಟ್​

ನವದೆಹಲಿ: ಕಳೆದ ವರ್ಷದ ಡಿಸೆಂಬರ್ 15 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಪೊಲೀಸ್ ದೌರ್ಜನ್ಯದ ಬಗ್ಗೆ ಸಮಿತಿ ಅಥವಾ ಎಸ್‌ಐಟಿ ನಡೆಸಿದ ತನಿಖೆಯ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆ ಕೋರಿ ಸಲ್ಲಿಸಿದ್ದ ಮನವಿಗೆ ದೆಹಲಿ ಹೈಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ಡಿಸೆಂಬರ್​​ 15ರಂದು ಜಾಮಿಯಾ ಬಳಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಬಸ್​​​ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ನಂತರ ಪೊಲೀಸರು ಜಾಮಿಯ ಒಳಗೆ ಪ್ರವೇಶಿಸಿದ್ದು, ಗಲಭೆ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಸಿಡಿಸಿದ್ದರು.

ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದಲ್ಲಿ ತನ್ನ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದ ಜಾಮಿಯಾ ವಿದ್ಯಾರ್ಥಿಯೊಬ್ಬ ಸಲ್ಲಿಸಿದ್ದ ಅರ್ಜಿ ಇದಾಗಿದ್ದು, ಈ ಬಗ್ಗೆ ತಮ್ಮ ನಿಲುವು ಕೋರಿ ಮುಖ್ಯ ನ್ಯಾಯಮೂರ್ತಿಗಳಾದ ಡಿ.ಎನ್. ಪಟೇಲ್​ ಹಾಗೂ ಸಿ.ಹರಿಶಂಕರ್ ನೇತೃತ್ವದ ಪೀಠ​​ ಕೇಂದ್ರ ಸರ್ಕಾರಕ್ಕೆ ನೋಟಿಸ್​​ ಜಾರಿ ಮಾಡಿದೆ.

ಈ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿ ಮಿನಾಜುದ್ದೀನ್, ತಮಗೆ ಆದ ದೌರ್ಜನ್ಯಕ್ಕೆ ಪರಿಹಾರ ಕೋರಿದ್ದು, ಚಿಕಿತ್ಸಾ ವೆಚ್ಚ ಭರಿಸುವಂತೆ ಹಾಗೂ ಶಾಶ್ವತ ಉದ್ಯೋಗ ನೀಡುವಂತೆ ಆಗ್ರಹಿಸಿ ಅರ್ಜಿ ಸಲ್ಲಿಸಿದ್ದರು.

ABOUT THE AUTHOR

...view details