ನವದೆಹಲಿ:ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೋವಿಡ್ -19 ವರದಿ ನೆಗೆಟಿವ್ ಬಂದಿದೆ ಎಂದು ದೆಹಲಿ ಆರೋಗ್ಯ ಸಚಿವರ ಕಚೇರಿ ತಿಳಿಸಿದೆ.
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಕೋವಿಡ್-19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವಾಲಯ ತಿಳಿಸಿದೆ.
ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದಾಗಿ ಜೂನ್ 15 ರಂದು ಈಶಾನ್ಯ ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಜೈನ್ ಅವರಿಗೆ, ಜೂನ್ 17 ರಂದು ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಜೂನ್. 19 ರಂದು ಜೈನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಅವರನ್ನು ಖಾಸಗಿ ಮ್ಯಾಕ್ಸ್ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಯಿತು. ಅಂದು ರಾತ್ರಿ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಯಿತು. ಕಳೆದ ಕೆಲ ದಿನಗಳಿಂದ ಚೇತರಿಕೆ ಕಂಡಿದ್ದ ಸತ್ಯೇಂದರ್ ಜೈನ್ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.