ಕರ್ನಾಟಕ

karnataka

ETV Bharat / bharat

ಕೊರೊನಾಗೆ ತುತ್ತಾಗಿರುವ ಸಚಿವ ಸತ್ಯೇಂದರ್ ಜೈನ್ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣ - ದೆಹಲಿ ಕೊರೊನಾ ಲೇಟೆಸ್ಟ್​ ನ್ಯೂಸ್​

ಕೊರೊನಾ ದೃಢಪಟ್ಟು ರಾಜೀವ್​ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಆಕ್ಸಿಜನ್​ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Delhi Health Minister Satyendar Jain
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್

By

Published : Jun 19, 2020, 4:04 PM IST

ನವದೆಹಲಿ: ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾದ ಬಳಿಕ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್​ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

ಕೊರೊನಾಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸುತ್ತಿದ್ದು, ಆರೋಗ್ಯ ಸಚಿವರಿಗೇ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿತ್ತು. ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸತ್ಯೇಂದರ್ ಜೈನ್ ಅವರಿಗೆ ಬುಧವಾರ ಕೊರೊನಾ ದೃಢಪಟ್ಟಿತ್ತು. ಬಳಿಕ ರಾಜೀವ್​ ಗಾಂಧಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಇದೀಗ ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ಆಕ್ಸಿಜನ್​ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ಲಾಸ್ಮಾ ಥೆರಪಿ ನಡೆಸಲು ಸಚಿವರನ್ನು ಸಾಕೇತ್​ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಆರೋಗ್ಯ ಸಚಿವರ ಕಚೇರಿ ಮೂಲಗಳು ಮಾಹಿತಿ ನೀಡಿವೆ.

ABOUT THE AUTHOR

...view details