ಕರ್ನಾಟಕ

karnataka

ETV Bharat / bharat

ಮಗನ ಎದುರೇ ಹೆಂಡ್ತಿ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಗಂಡ! - ದೆಹಲಿ ಕ್ರೈಂ ಸುದ್ದಿ

ವ್ಯಕ್ತಿಯೊಬ್ಬ ಕಟ್ಟಿಕೊಂಡ ಹೆಂಡತಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Delhi man kills wife
Delhi man kills wife

By

Published : Sep 25, 2020, 4:18 PM IST

ನವದೆಹಲಿ:33 ವರ್ಷದ ವ್ಯಕ್ತಿಯೋರ್ವ ನಾಲ್ಕು ವರ್ಷದ ಮಗುವಿನ ಮುಂದೆ ಹೆಂಡತಿ ಕೊಲೆ ಮಾಡಿದ್ದು, ತದನಂತರ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

28 ವರ್ಷದ ಹೆಂಡತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಗಂಡ ತದನಂತರ ತನ್ನ ರಕ್ತನಾಳ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಆದರೆ, ಆತನನ್ನ ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ನವದೆಹಲಿಯ ದ್ವಾರಕಾದ ದಾಬ್ರಿ ಎಂಬಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ಇವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಗಂಡ ಬೇರೆ ಸಂಬಂಧ ಹೊಂದಿದ್ದರಿಂದ ಕಳೆದ ಒಂದು ವರ್ಷದಿಂದ ಹೆಂಡತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಹೆಂಡತಿ ಭೇಟಿ ಮಾಡಿರುವ ಆತ ಜಗಳ ಮಾಡಿದ್ದಾನೆ. ಈ ವೇಳೆ, ಆಕ್ರೋಶದಲ್ಲೇ ಕೊಲೆ ಮಾಡಿದ್ದಾನೆ. ಇದಾದ ಬಳಿಕ ಆತನು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅವರು ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಮಗು ಚಿಕ್ಕಮ್ಮನ ಮನೆಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಲೆ ಮಾಡಿರುವ ವ್ಯಕ್ತಿ ವಿರುದ್ಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಬಂಧನ ಮಾಡಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details