ಕರ್ನಾಟಕ

karnataka

ETV Bharat / bharat

ಪತನದ ಹಾದಿಯಲ್ಲಿ ಮಧ್ಯಪ್ರದೇಶ ಸರ್ಕಾರ; ಮಾರ್ಚ್​ 12ಕ್ಕೆ ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿ ಸೇರ್ಪಡೆ?

ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂದಿಯಾ ಇದೀಗ ಬಿಜೆಪಿ ಸೇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

BJP Central Election Committee
BJP Central Election Committee

By

Published : Mar 10, 2020, 7:56 PM IST

Updated : Mar 10, 2020, 8:01 PM IST

ನವದೆಹಲಿ: ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಇದರ ಬೆನ್ನಲ್ಲೇ ಪ್ರದಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮಹತ್ವದ ಸಭೆ ನಡೆದಿದೆ.

ಮಾರ್ಚ್​ 12ಕ್ಕೆ ಬಿಜೆಪಿ ಸೇರಲಿರುವ ಸಿಂದಿಯಾ?

ಬೆಳಿಗ್ಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ​ ಜ್ಯೋತಿರಾದಿತ್ಯ ಸಿಂದಿಯಾ ಮಾರ್ಚ್​​ 12ಕ್ಕೆ ಬಿಜೆಪಿ ಸೇರಿಕೊಳ್ತಾರೆ ಎಂದೇ ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆ ಸಮಾರಂಭ ಭೋಪಾಲ್​ನಲ್ಲಿ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.

ಮಧ್ಯಂತರ ಚುನಾವಣೆಗೆ ಕಮಲ್​ನಾಥ್ ಕರೆ:

ಮಧ್ಯಂತರ ಚುನಾವಣೆ ಎದುರಿಸಲು ಸಜ್ಜಾಗಿ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್​ನಾಥ್​ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದ್ದು, ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:

ಮೋದಿ ನೇತೃತ್ವದ ಸಭೆಯಲ್ಲಿ ರಾಜನಾಥ್​ ಸಿಂಗ್​, ನಿತಿನ್​ ಗಡ್ಕರಿ, ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಪ್ರಮುಖ ಸಚಿವರು ಭಾಗಿಯಾಗಿದ್ದು, ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜಕೀಯ ಬಿಕ್ಕಟ್ಟು: ಮೋದಿ ನೇತೃತ್ವದಲ್ಲಿ ಸಭೆ

ಕಾಂಗ್ರೆಸ್​ನ 22 ಶಾಸಕರು ಒಂದೇ ದಿನ ರಾಜೀನಾಮೆ ನೀಡಿರುವ ಕಾರಣ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಈಗಾಗಲೇ ಫೈನಲ್​ ಹಂತಕ್ಕೆ ತಲುಪಿದೆ. ಹೀಗಾಗಿ ಕಮಲ್​ನಾಥ್​ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಯಾವುದೇ ಹಾದಿ ಕಾಣದಂತಾಗಿದ್ದು, ರಾಜೀನಾಮೆ ನೀಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತಗೊಂಡಿರುವ ಕಾರಣ ರಾಜ್ಯಸಭೆ ಟಿಕೆಟ್​ ನೀಡಿ, ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ಮಾರ್ಚ್​ 26ರಂದು ರಾಜ್ಯಸಭೆಯ ಕೆಲ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್​ ಮಾಡಲಿದೆ. ಅದೇ ಕಾರಣಕ್ಕಾಗಿ ಇದೀಗ ಮೋದಿ ನೇತೃತ್ವದಲ್ಲಿ ಸಭೆ ಸೇರಿರುವ ಸಾಧ್ಯತೆ ದಟ್ಟವಾಗಿದೆ.

ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಶಾ ಭೇಟಿಯಾಗಿದ್ದ ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್​ನ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಮುಖಂಡೆ ಹಾಗೂ ಜ್ಯೋತಿರಾದಿತ್ಯ ಸಿಂದಿಯಾ ಚಿಕ್ಕಮ್ಮ ಯಶೋಧರಾ, ಅವರು ಘರ್​ ವಾಪಸಿ ಆಗುತ್ತಿರುವುದು ಸಂತಸ ತಂದಿದೆ ಎಂದಿದ್ದರು.

Last Updated : Mar 10, 2020, 8:01 PM IST

ABOUT THE AUTHOR

...view details