ಕರ್ನಾಟಕ

karnataka

ETV Bharat / bharat

ಇಂಟರ್ನಲ್ಸ್​ ಆಧಾರದ ಮೇಲೆ ಗ್ರೇಡ್​ ನೀಡಲು ದೆಹಲಿ ವಿವಿ ನಿರ್ಧಾರ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ?

ಅಂತಿಮ ವರ್ಷದ ಸ್ನಾತಕೋತ್ತರ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮುಕ್ತ ಪುಸ್ತಕ ಪರೀಕ್ಷೆಯನ್ನು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.

du
du

By

Published : Jun 5, 2020, 11:32 AM IST

ನವದೆಹಲಿ:ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಅವರ ಆಂತರಿಕ ಮೌಲ್ಯಮಾಪನ(ಇಂಟರ್ನಲ್ಸ್​) ಮತ್ತು ಹಿಂದಿನ ಸೆಮಿಸ್ಟರ್‌ನಲ್ಲಿನ ಸಾಧನೆಯ ಆಧಾರದ ಮೇಲೆ ಶ್ರೇಣೀಕರಿಸಲಾಗುವುದು ಎಂದು ದೆಹಲಿ ವಿಶ್ವವಿದ್ಯಾಲಯ ತಿಳಿಸಿದೆ.

ಅಂತಿಮ ವರ್ಷದ ಸ್ನಾತಕೋತ್ತರ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮುಕ್ತ ಪುಸ್ತಕ ಪರೀಕ್ಷೆಯನ್ನು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.

ಆದರೆ ಸ್ನಾತಕೋತ್ತರ ಕೋರ್ಸ್‌ಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಪದವಿಪೂರ್ವ ಕೋರ್ಸ್‌ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಮುಕ್ತ ಪುಸ್ತಕ ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅನಿವಾರ್ಯ. ಆದರೆ ಕೋವಿಡ್-19 ಹಿನ್ನೆಲೆ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯ ಅಥವಾ ಕಾಲೇಜಿಗೆ ಕರೆಸಿ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಆನ್​ಲೈನ್ ಮುಕ್ತ ಪುಸ್ತಕ ಪರೀಕ್ಷೆ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.

ABOUT THE AUTHOR

...view details