ಕರ್ನಾಟಕ

karnataka

ETV Bharat / bharat

ದೆಹಲಿ ಹಿಂಸಾಚಾರ: ಈವರೆಗೆ 167 ಎಫ್‌ಐಆರ್, 885 ಜನರ ಬಂಧನ

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈವರೆಗೆ 167 ಎಫ್‌ಐಆರ್ ದಾಖಲಿಸಿದ್ದಾರೆ. ಈ ಪೈಕಿ ಈವರೆಗೆ 885 ಜನರನ್ನು ಬಂಧಿಸಲಾಗಿದೆ.

delhi violence
ದೆಹಲಿ ಹಿಂಸಾಚಾರ

By

Published : Mar 1, 2020, 4:14 AM IST

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈವರೆಗೆ 167 ಎಫ್‌ಐಆರ್ ದಾಖಲಿಸಿದ್ದಾರೆ. ಈ ಪೈಕಿ ಈವರೆಗೆ 885 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶವು ಈಗ ಶಾಂತಿಯುತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ವಕ್ತಾರ ಮನದೀಪ್ ಸಿಂಗ್ ರಂಧವಾ ಈ ಬಗ್ಗೆ ಮಾಹಿತಿ ನೀಡಿದ್ದು, ಹಿಂಸಾಚಾರ ಹಿನ್ನೆಲೆಯಲ್ಲಿ ಈವರೆಗೆ ಒಟ್ಟು 167 ಎಫ್‌ಐಆರ್ ದಾಖಲಿಸಲಾಗಿದೆ. ಇದಲ್ಲದೆ, ಅಪರಾಧ ವಿಭಾಗ ಮತ್ತು ವಿಶೇಷ ವಿಭಾಗದ ತಂಡಗಳು ಶಸ್ತ್ರಾಸ್ತ್ರಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಅನೇಕ ಜನರನ್ನು ಅಕ್ರಮ ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಲಾಗಿದೆ. ಅಂತವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ. ಇಲ್ಲಿಯವರೆಗೆ ಪೊಲೀಸರು 885 ಜನರನ್ನು ವಶಕ್ಕೆ ಪಡೆದಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಶಾಂತಿ ನೆಲೆಸಿದ್ದು, ಶನಿವಾರ ಹಿಂಸಾಚಾರಕ್ಕೆ ಸಂಬಂಧಿಸಿದ ಯಾವುದೇ ಕರೆಗಳು ಬಂದಿಲ್ಲ ಎಂದಿದ್ದಾರೆ.

ಅಲ್ಲದೆ ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂಗಳಲ್ಲಿ ಆಕ್ಷೇಪಾರ್ಹ ಪೋಸ್ಟ್​ಗಳನ್ನು ಪೋಸ್ಟ್ ಮಾಡಿದ 13 ಜನರ ವಿರುದ್ಧ ಪ್ರಕರಣ ದಾಖಲಾಗಿವೆ. ಅಂತವರ ಸಾಮಾಜಿಕ ಜಾಲತಾಣ ಖಾತೆಯ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್​ ಮಾಡದಂತೆ ದೆಹಲಿ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ. ಪೋಸ್ಟ್​ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮನದೀಪ್ ಸಿಂಗ್ ತಿಳಿಸಿದ್ದಾರೆ.

ABOUT THE AUTHOR

...view details