ನವದೆಹಲಿ:ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ನೊಂದವರ ಹಾಗೂ ಅಲ್ಲಿನ ಜನರ ಸುರಕ್ಷತೆಗೆ ಪೊಲೀಸರು ಯಾವೆಲ್ಲ ಕ್ರಮಗಳನ್ನ ಕೈಗೊಂಡಿದ್ದಾರೆ ಹಾಗೂ ಪುನರ್ವಸತಿ ಮತ್ತು ವೈದ್ಯಕೀಯ ಕ್ರಮಗಳ ಕುರಿತಂತೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ. ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಸಿ .ಹರಿಶಂಕರ್ ಅವರಿದ್ದ ನ್ಯಾಯಪೀಠವು ಫೆಬ್ರವರಿ 26 ರ ಆದೇಶಕ್ಕೆ ಅನುಸಾರವಾಗಿ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತು. ಏಪ್ರಿಲ್ 30ಕ್ಕೆ ವಿಚಾರಣೆಯನ್ನು ಮುಂದೂಡಿತು.